Home » ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ
 

ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ

by Kundapur Xpress
Spread the love

ಉಡುಪಿ : ವ್ಯಕ್ತಿಯೊಬ್ಬರಿಗೆ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೆನ್ರಿ ಡಿ ಅಲ್ಮೇಡಾ(69) ಹಣ ಕಳೆದುಕೊಂಡ ವ್ಯಕ್ತಿ.

ಹೆನ್ರಿ ಡಿ ಅಲ್ಮೇಡಾ ಜು.19ರಂದು ಫೇಸ್‌ಬುಕ್‌ನಲ್ಲಿ ಇನ್ವೆಸ್ಟ್ ಮೆಂಟ್ ಟ್ರೇಡಿಂಗ್ ಮಾಡುವುದರ ಬಗ್ಗೆ ಜಾಹಿರಾತನ್ನು ನೋಡಿದ್ದು, ಅದನ್ನು ಕ್ಲಿಕ್ ಮಾಡಿದಾಗ ಲಿಂಕ್ ಓಪನ್ ಆಗಿತ್ತು. ಬಳಿಕ ಹೆನ್ರಿ ಅವರ ವಾಟ್ಸಾಪ್‌ಗೆ ಟ್ರೇಡಿಂಗ್ ಹೂಡಿಕೆ ಮಾಡುವಂತೆ ಸಂದೇಶ ಬಂದಿದ್ದು, ಅಂಕಿತಾ ಘೋಷ್ ಎಂಬಾತ ಕರೆ ಮಾಡಿ ಹೂಡಿಕೆ ಬಗ್ಗೆ ಮಾಹಿತಿ ತಿಳಿಸಿ ವಾಟ್ಸಾಪ್ ಗ್ರೂಪ್‌ಗೆ ಸೇರ್ಪಡೆ ಮಾಡಿದರು.

ಆ ಗ್ರೂಪಿನಲ್ಲಿನ ವಿವಿಧ ನಂಬರ್‌ಗಳಲ್ಲಿ ಹೂಡಿಕೆ ಮಾಡಿದರೆ ಲಾಭಾಂಶ ಗಳಿಸಬಹುದು ಎಂಬ ಸಂದೇಶಗಳಿದ್ದು, ಅದನ್ನು ನಂಬಿದ ಹೆನ್ರಿ, ಜು.22ರಿಂದ ಸೆ.1ರವರೆಗೆ ಹಂತ ಹಂತವಾಗಿ ಒಟ್ಟು 1,32,90,000 ರೂ. ಹಣವನ್ನು ಹೂಡಿಕೆ ಮಾಡಿದರು. ತದನಂತರ ಆರೋಪಿಗಳು ಹೂಡಿಕೆ ಮಾಡಿದ ಹಣವನ್ನಾಗಲಿ ಅಥವಾ ಲಾಭಾಂಶವನ್ನಾಗಲಿ ನೀಡದೇ ನಂಬಿಸಿ ಮೋಸ ಮಾಡಿರುವುದಾಗಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ

 

Related Articles

error: Content is protected !!