ಉಡುಪಿ : ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಉಡುಪಿ ಜಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರು ಸೂಚನೆ ನೀಡಿದ್ದಾರೆ
ಉಡುಪಿ ಜಿಲ್ಲೆಯಲ್ಲಿ ಸೋಮವಾರ ಭಾರಿ ಮಳೆಯಿಂದಾಗಿ ಹಲವೆಡೆ ಹಾನಿಗಳಾಗಿದ್ದು ಇನ್ನೂ ನಾಲ್ಕು ದಿನಗಳ ಕಾಲ ವಿಪರೀತ ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆ ಇದೆ ಎನ್ನಲಾಗಿದೆ