ಉಡುಪಿ : ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿ ಸೂಚನೆ ನೀಡಿದರು. ನಗರ ಅಥವಾ ಗ್ರಾಮೀಣ ಭಾಗದಲ್ಲಿ ಜನ ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು. ಯಾರೊಬ್ಬರೂ ದೂರವಾಣಿ ಮೂಲಕ ನೀರಿನ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದ್ದಲ್ಲಿ 24 ಗಂಟೆಯ ಒಳಗಾಗಿ ಅದನ್ನು ಬಗೆಹರಿಸಬೇಕು. ಮಳೆ ಬರುವವರೆಗೂ ನೀರಿನ ಸಮಸ್ಯೆಗೆ ಸ್ಪಂದಿಸಲು ಸದಾ ಸನ್ನದ್ದರಾಗಿರಬೇಕು ಎಂದರು.