ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 03-09-2024 ರಂದು ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಪಿ.ಎಂ ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಚರ್ಚಿಸಿದರು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿಗಳಾದ ಮಮತಾ ದೇವಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ್ ನಾಯಕ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.