ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ನಡೆಯುವ ಚುನಾವಣೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಸಾಂವಿಧಾನಿಕ ಹಕ್ಕಿನಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ, ಮತದಾನ ದಿನದಂದು ಮತದಾನ ಮಾಡಲು ಅನುಕೂಲವಾಗುವಂತೆ ಸಂಘ-ಸಂಸ್ಥೆಗಳಲ್ಲಿ, ವಾಣಿಜ್ಯ ಉದ್ದಿಮೆಗಳಲ್ಲಿ ಕೈಗಾರಿಕಾ ಘಟಕ ಸೇರಿದಂತೆ ಸಣ್ಣ ಮತ್ತು ದೊಡ್ಡ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕ ಹಾಗೂ ಸಿಬ್ಬಂದಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ‘ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ