Home » ಮತದಾನದಿಂದ ಪ್ರಜಾಪ್ರಭುತ್ವ ಮತ್ತಷ್ಟು ಸದೃಢ
 

ಮತದಾನದಿಂದ ಪ್ರಜಾಪ್ರಭುತ್ವ ಮತ್ತಷ್ಟು ಸದೃಢ

by Kundapur Xpress
Spread the love

ಉಡುಪಿ : ಸಾಂವಿಧಾನಿಕವಾಗಿ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಚಲಾಯಿ ಸುವ ಮೂಲಕ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಜಾಪ್ರಭುತ್ವವನ್ನು ಮತ್ತಷ್ಟು ದೃಢಗೊಳಿಸಬೇಕೆಂದು ಡಿಸಿ ಡಾ.ಕೆ ವಿದ್ಯಾಕುಮಾರಿ ಸೂಚಿಸಿದರು.

ಸೋಮವಾರ, ನಗರದ ಅಜ್ಜರಕಾಡಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚುನಾವಣಾ ಸಾಕ್ಷರತ ಸಂಘ, ರೆಡ್ ಕ್ರಾಸ್ ಘಟಕ, ಆಂತರಿಕ ಗುಣಮಟ್ಟ ಭರವಸ ಕೋಶ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಉಡುಪಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮತದಾನದ ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ನಮ್ಮ ದೇಶದಲ್ಲಿರುವ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮದು. ಸಾರ್ವತ್ರಿಕ ಚುನಾವಣೆ ನಡೆಯುವುದು ನಮಗಾಗಿ ಈ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಂವಿಧಾನದ ಮೂಲಕ ನಮ್ಮೆಲ್ಲರಿಗೂ ಅವಕಾಶ ಒದಗಿಬಂದಿದೆ. ಯಾರೊಬ್ಬರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಸಕ್ತಿ ತೊರದೆ ಉತ್ಸಾಹದಿಂದ ಭಾಗವಹಿಸಿ ಯಾವುದೇ ಆಸೆ ಆಮಿಷ ಮತ್ತಿತರ ಪ್ರಚೋದನೆಗೆ ಒಳಗಾಗದೆ ತಪ್ಪದೇ ಮತ ಚಲಾಯಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮತದಾನ ಪ್ರಮಾಣ ವಚನ ಬೋಧಿಸಿದರು. ನಂತರ ಮತದಾರರ ಜಾಗೃತಿ ಜಾಥಕ್ಕೆ ಚಾಲನೆ ನೀಡುವುದರೊಂದಿಗೆ ಹೆಜ್ಜೆ ಹಾಕಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಮತದಾನದ ಜಾಗೃತಿ ಘೋಷಣೆಗಳನ್ನು ಕೂಗುತ್ತಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಭಾಸ್ಕರ್ ಶೆಟ್ಟಿ ಎಸ್, ಪೌರಾಯುಕ್ತ ರಾಯಪ್ಪ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ.ಮತ್ತಿತರರು ಇದ್ದರು.

   

Related Articles

error: Content is protected !!