ಬೆಂಗಳೂರು : ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರಲಿದೆ. ನಮ್ಮ ಸರ್ಕಾರ ಬಲಿಷ್ಠವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬಿಡದಿಯ ಅವರಗೆರೆಯಲ್ಲಿ ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್ರನ್ನು ಸೋಲಿಸುವ ಉದ್ದೇಶದಿಂದ ಬಿಜೆಪಿ ಹಾಗೂ ಜೆಡಿಎಸ್ ತಬ್ಬಿಕೊಂಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಹಾಗೂ ಯೋಗೇಶ್ವರ್ ಹಿಂದೆ ಕುಸ್ತಿ ಆಡುತ್ತಿದ್ದರು. ಈಗ ಸುರೇಶ್ ಸೋಲಿಸಲು ಒಂದಾಗಿದ್ದಾರೆ. ನಾನು ಈ ಕ್ಷೇತ್ರದಲ್ಲಿ ಸಮೀಕ್ಷೆ ಮಾಡಿಸಿದ್ದೇನೆ. ಜೆಡಿಎಸ್ಗೆ ಮತ ಹಾಕುತ್ತಿದ್ದವರು ಕೂಡ ಈ ಬಾರಿ ಸುರೇಶ್ ಹಾಗೂ ಕಾಂಗ್ರೆಸ್ಗೆ ಮತ ಹಾಕಲಿದ್ದಾರೆ