ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ಅನ್ನು ಜಾರಿ ಗೊಳಿಸಿದೆ.
ಐಟಿ ಕಚೇರಿಗೆ ಹಾಜರಾಗಿ ಅಕ್ರಮ ಆಸ್ತಿ ಗಳಿಕೆ ಸಂಬಂಧ ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಆದರೆ ಯಾವಾಗ ಹಾಜರಾಗುವಂತೆ ತಿಳಿಸಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. 2017ರಲ್ಲಿ ಐಟಿ ಅಧಿಕಾರಿಗಳು ಶಿವಕುಮಾರ್ ಅವರ ನಿವಾಸ ಸೇರಿದಂತೆ ಅವರ ಸಂಬಂಧಿ, ಸ್ನೇಹಿತರು ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದರು. ದೆಹಲಿಯಲ್ಲಿನ ಅವರ ನಿವಾಸದ ಮೇಲೆಯೂ ದಾಳಿ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರು. ನಗದು ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿದ ಐಟಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದರು.
ತೆರಿಗೆ ಇಲಾಖೆಯಿಂದ ತಮಗೆ ಇನ್ನೊಂದು ನೋಟಿಸ್ ಬಂದಿದೆ ಎಂದು ಡಿ.ಕೆ.ಶಿವಕುಮಾರ್ ದೃಢಪಡಿಸಿದ್ದಾರೆ