ಕುಂದಾಪುರ : ಸ್ಥಳೀಯ ಪೊಲೀಸ್ ಉಪವಿಭಾಗದ ನೂತನ ಡಿವೈಎಸ್ಪಿ ಯಾಗಿ ಎಚ್.ಡಿ.ಕುಲಕರ್ಣಿ ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರು ಸಿಐಡಿಯಲ್ಲಿ ಡಿವೈಎಸ್ಪಿ ಆಗಿದ್ದ ಅವರನ್ನು ಇದೀಗ ಕುಂದಾಪುರ ಪೊಲೀಸ್ ಉಪವಿಭಾಗದ ಉಪಾಧೀಕ್ಷಕರಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಹಿಂದಿನ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಅವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ