ಉಡುಪಿ : ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ (66,169,169A,766C) ಕಾಮಗಾರಿಗಳ ಪ್ರಗತಿ ಮತ್ತು ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಸಭೆಯಲ್ಲಿ ಶಾಸಕರು ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ದಾರಿದೀಪ ಇಲ್ಲದೇ ಇದ್ದು ಸರಿಪಡಿಸುವ ಬಗ್ಗೆ ಕಟಪಾಡಿ ಜಂಕ್ಷನ್ ನಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಓವರ್ ಪಾಸ್ ಕಾಮಗಾರಿ ಪ್ರಸ್ತುತ ಯಾವ ಹಂತದಲ್ಲಿ ಇದೆ ಎಂಬುದರ ಬಗ್ಗೆ ಚರ್ಚಿಸಿದರು. ಈ ಹಿಂದೆ ಪ್ರಸ್ತಾಪಿಸಿದಂತೆ ಉಚ್ಚಿಲ ಹಾಗೂ ಪಡುಬಿದ್ರೆಯಲ್ಲಿ ಸರ್ವಿಸ್/ಬೈಪಾಸ್ ರಸ್ತೆ ಯಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಅಪಘಾತ ವಲಯಗಳಲ್ಲಿ ಬ್ಯಾರಿಕೇಡ್ ಅಳವಡಿಸುವ ಬಗ್ಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪೈಪ್ ಲೈನ್ ಕಾಮಗಾರಿಗಳನ್ನು ನಡೆಸುವಾಗ ಹೊಂಡವನ್ನು ಮುಚ್ಚದೆ ಹಾಗೆ ಬಿಟ್ಟಿದ್ದು, ಇದು ಅಪಾಯಕಾರಿ ಸ್ಥಿತಿಯಲ್ಲಿರುವುದರಿಂದ ಸಂಬಂಧಪಟ್ಟವರಿಗೆ ತುರ್ತು ಕ್ರಮ ವಹಿಸುವಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮರು ಡಾಮರೀಕರಣ ಮಾಡಿದ ಕಡೆಗಳಲ್ಲಿ ದ್ವಿಪಥ ರಸ್ತೆಗಳ ಅಂಚಿನಲ್ಲಿ ಬಿಳಿ ಪಟ್ಟಿ ಅಳವಡಿಸುವಂತೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಅರುಣ್ ಕುಮಾರ್, ಅಪರ ಜಿಲ್ಲಾಧಿಕಾರಿಗಳಾದ ಮಮತಾ ದೇವಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗಣಪತಿ ನಾಯಕ್, ರಾಷ್ಟ್ರೀಯ ಹೆದ್ದಾರಿಗೆ ಸಂಭಂದಿಸಿದ ಇಲಾಖಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.