ಕುಂದಾಪುರ : ಕುಂದಾಪುರ ನಗರದ ಚಿಕ್ಕನಸಾಲು ರಸ್ತೆಯ ನಿವಾಸಿಯಾದ ಕೆ. ದತ್ತಾತ್ರೇಯ ದೇವಾಡಿಗರವರು ಶುಕ್ರವಾರ ಸಂಜೆಯ ವೇಳೆಗೆ ತೀವ್ರ ಹೃದಯಾಘಾತದಿಂದ ತನ್ನ ಸ್ವಗೃಹದಲ್ಲಿ ನಿಧನ ಹೊಂದಿದ್ದು ಅವರ ಅಂತ್ಯಕ್ರಿಯೆಯು ಇಂದು ಬೆಳಿಗ್ಗೆ 11.00 ಗಂಟೆಗೆ ಚಿಕ್ಕನಸಾಲು ರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಜರುಗಲಿದೆ ಎಂದು ಅವರ ಕುಟುಂಬಿಕರು ತಿಳಿಸಿದ್ದಾರೆ
ಸಂತಾಪ :
ಕೆ. ದತ್ತಾತ್ರೇಯ ದೇವಾಡಿಗರವರ ನಿಧನಕ್ಕೆ ಲಯನ್ಸ್ ಕ್ಲಬ್ ಕುಂದಾಪುರ ಹಾಗೂ ಶ್ರೀ ಮೈಲಾರೇಶ್ವರ ಯುವಕ ಮಂಡಲದ ಸದಸ್ಯರು ಮತ್ತು ಮೊಗವೀರ ಮಹಾಜನ ಸೇವಾ ಸಂಘದ ಕುಂದಾಪುರ ಶಾಖೆಯ ಮಾಜಿ ಅಧ್ಯಕ್ಷರಾದ ಶಿವರಾಮ್ ಪುತ್ರನ್ ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ