Home » ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಸಾವು
 

ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಸಾವು

by Kundapur Xpress
Spread the love

ಗಂಗೊಳ್ಳಿ: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಪ್ರದೀಪ್ ಸಿ ಪೂಜಾರಿ (33) ಅವರ ದೂರಿನ ಪ್ರಕಾರ, ಅವರ ದೊಡ್ಡಮ್ಮನ ಮಗ ಜನಾರ್ಧನ ಪೂಜಾರಿ (43) ಅವರು ಕೃಷಿ ಹಾಗೂ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ದಿನಾಂಕ 03/04/2026 ರಂದು ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 02:30 ಗಂಟೆಯ ನಡುವೆ ಕುಂದಬಾರಂದಾಡಿ ಗ್ರಾಮದ ತೊರೊಳ್ಳಿ ಬಳಿಯ ಚಕ್ರ ನದಿಗೆ ಮೀನುಗಾರಿಕೆಗೆ ತೆರಳಿದ್ದರು.

ಈ ವೇಳೆ ಮೀನು ಹಿಡಿಯುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದ ಅವರು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

 

Related Articles

error: Content is protected !!