ಕುಂದಾಪುರ: ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಶಿನಗುಂಡಿ ಎಂಬಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕನೋರ್ವ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ಸಂಭವಿಸಿದೆ.
ಭದ್ರಾವತಿ ಮೂಲದ ಶರತ್ ಕುಮಾರ್ (23) ನೀರುಪಾಲಾದ ಯುವಕ ಎಂದು ಗುರುತಿಸಲಾಗಿದೆ ಭಾನುವಾರ ಮಧ್ಯಾಹ್ನ ಕೊಲ್ಲೂರಿಗೆ ತನ್ನ ಸ್ನೇಹಿತ ಗುರುರಾಜ್ ನೊಂದಿಗೆ ಕಾರಿನಲ್ಲಿ ಬಂದಿದ್ದ ಶರತ್ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ ದೃಶ್ಯ ನೋಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ
ಕೂಡಲೇ ಶರತ್ ಸ್ನೇಹಿತ ಗುರುರಾಜ್ ಸಮೀಪದಲ್ಲಿರುವ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿ ಸ್ಥಳೀಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿದ್ದರೂ ಶರತ್ ಪತ್ತೆಯಾಗಲಿಲ್ಲ ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿಗಳು, ಕೊಲ್ಲೂರು ಪೊಲೀಸರು ಸೋಮವಾರ ಬೆಳಿಗ್ಗೆನಿಂದಲೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಈಜುಪಟು ಈಶ್ವರ್ ಮಲ್ಪೆ ಮತ್ತವರ ತಂಡವೂ ಆಗಮಿಸಿದೆ.