207
ಉಡುಪಿ : ಬಿಲ್ಲವ ಸೇವಾ ಸಂಘ(ರಿ.), ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಡಿ.2 ಶನಿವಾರ ಸಂಜೆ ಗಂಟೆ 6.30ಕ್ಕೆ “ತುಳಸೀ ಪೂಜೆ, ದೀಪೋತ್ಸವ, ದೀಪಾರಾಧನೆ ಹಾಗೂ ಭಜನಾ ಸೇವೆ” ನಡೆಯಲಿದೆ
ಡಿ.10 ರವಿವಾರ ಬೆಳಿಗ್ಗೆ ಗಂಟೆ 10.00ಕ್ಕೆ “31ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ”ಯು ಶ್ರೀ ವಿಠೋಬ ಭಜನಾ ಮಂದಿರದಲ್ಲಿ ನಡೆಯಲಿದ್ದು, ಮಧ್ಯಾಹ್ನ ಗಂಟೆ 12.00ಕ್ಕೆ ಮಹಾ ಪೂಜೆ ಹಾಗೂ 12.30ಕ್ಕೆ ಅನ್ನ ಪ್ರಸಾದ ವಿತರಣೆ ನಡೆಯಲಿದೆ ಎಂದು ಸಂಘದ ಆಡಳಿತ ಸಮಿತಿಯ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

