170
ಕುಂದಾಪುರ : ಇಂದು ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದ ಹಿನ್ನೆಲೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಹಾಗೂ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ನಿಕಟ ಪೂರ್ವ ಬಿಜೆಪಿ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್. ಕೆ.ಎಸ್ ಇವರ ಉಪಸ್ಥಿತಿಯಲ್ಲಿ ಕುಂದಾಪುರ ನಗರದ ಶಾಸ್ತ್ರಿ ವ್ರತದ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸಲಾಯಿತು
ವಿಜಯೋತ್ಸವ ಸಂಭ್ರಮದಲ್ಲಿ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)