105
ಉಡುಪಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕರೆಯಂತೆ ವಿಕಸಿತ ಭಾರತ ಪರಿಕಲ್ಪನೆಯಡಿ ‘ಏಕ್ ಪೇಡ್ ಮಾ ಕೇ ನಾಮ್’ ಅಭಿಯಾನದ ಪ್ರಯುಕ್ತ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಉಡುಪಿ ಕುಂಜಿಬೆಟ್ಟು ಶಾರದಾ ಮಂಟಪದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಅಭಿಯಾನದ ಜಿಲ್ಲಾ ಸಂಚಾಲಕ ರಾಜೇಶ್ ಕಾವೇರಿ, ಸಹ ಸಂಚಾಲಕರಾದ ಸಂಧ್ಯಾ ರಮೇಶ್, ದಿಲೇಶ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

