401
ಉಡುಪಿ : ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ನೂತನ ಅಧ್ಯಕ್ಷರನ್ನಾಗಿ ಕುಂದಾಪುರದ ಕಿಶೋರ್ ಕುಮಾರ್ ಇವರನ್ನು ನೇಮಿಸಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರವರು ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಕಿಶೋರ್ ಕುಮಾರ್ ರಾಜ್ಯ ಮೀನುಗಾರರ ಪ್ರಕೋಷ್ಟದ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು ಅವರು 2013 ರಲ್ಲಿ ಅಂದಿನ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಪಕ್ಷೇತರರಾಗಿ ಸ್ಪರ್ಧೆ ಮಾಡಿದ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕುಂದಾಪುರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು
ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ರಾಜ್ಯದ ಒಟ್ಟು 20 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ


