ಉಡುಪಿ : ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ 187 ಕೋಟಿ ರೂಪಾಯಿ ಮೊತ್ತವನ್ನು ದುರ್ಬಳಕೆ ಮಾಡಿರುವ ಹಗರಣವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ನಾಳೆ ಜೂನ್ 26, ಬುಧವಾರ ಬೆಳಿಗ್ಗೆ ಗಂಟೆ 11.00ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ
ಪಕ್ಷದ ವತಿಯಿಂದ ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಎಸ್.ಟಿ. ಮೋರ್ಚಾ ಸಹಿತ ಜಿಲ್ಲೆಯ ಎಲ್ಲಾ ಮೋರ್ಚಾಗಳು, ಪ್ರಕೋಷ್ಠಗಳು ಮತ್ತು ಮಂಡಲಗಳ ಸಹಯೋಗದಿಂದ ನಡೆಯಲಿರುವ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಕಾರ್ಯಕ್ರಮದಲ್ಲಿ ಸಂಸದರು, ಜಿಲ್ಲೆಯ ಶಾಸಕರು, ಪಕ್ಷದ ಮುಖಂಡರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಹಿತ ಮೋರ್ಚಾ, ಪ್ರಕೋಷ್ಟ, ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಮಟ್ಟದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಗ್ರಾಮ ಪಂಚಾಯತ್ ಸಹಿತ ಎಲ್ಲಾ ಸ್ತರದ ಜನ ಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಮುತ್ತಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ