Home » ಬಿಜೆಪಿ ಜಿಲ್ಲಾ ರೈತ ಮೋರ್ಚಾ ಬೃಹತ್ ಪ್ರತಿಭಟನೆ
 

ಬಿಜೆಪಿ ಜಿಲ್ಲಾ ರೈತ ಮೋರ್ಚಾ ಬೃಹತ್ ಪ್ರತಿಭಟನೆ

by Kundapur Xpress
Spread the love

ಉಡುಪಿ : ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಜೂ.26ರಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯ ನೇತೃತ್ವ ವಹಿಸಿದ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕನ್ನಾರು ಕಮಲಾಕ್ಷ ಹೆಬ್ಬಾರ್ ಪ್ರಸ್ತಾವಿಕವಾಗಿ ಮಾತನಾಡಿ ಹೈನುಗಾರಿಗೆ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ, ಬಿತ್ತನೆ ಬೀಜದ ದರ ಏರಿಕೆ ಮತ್ತು ಕೊರತೆ ಹಾಗೂ ತೈಲಬೆಲೆ ಏರಿಕೆಯನ್ನು ಖಂಡಿಸಿ, ಜಿಲ್ಲೆಯಲ್ಲಿ ಕೃಷಿ ಕಾಲೇಜು ಪ್ರಾರಂಭಿಸುವ ಕುರಿತು ಹಾಗೂ ಕುಮ್ಕಿ ಹಕ್ಕು ಮತ್ತು ಆಕ್ರಮ ಸಕ್ರಮ ಹಂಚಿಕೆ ಮಾಡುವ ಬಗ್ಗೆ ಅಗ್ರಹಿಸಿ ಸರಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗುವುದು ಎಂದರು

ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮತ್ತು ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ! ನವೀನ್ ಕುಮಾರ್ ಸಭೆಯನ್ನುದ್ದೇಶಿಸಿ ಮಾತನಾಡಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ರೈತ ವಿರೋಧಿ ಮತ್ತು ಜನ ವಿರೋಧಿ ನೀತಿಯನ್ನು ಖಂಡಿಸಿದರು. ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರವನ್ನು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾ ಸಭೆಯ ಪೂರ್ವಭಾವಿಯಾಗಿ ಮಣಿಪಾಲದ ಕಾಯಿನ್ ಸರ್ಕಲ್ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಚೆಂಡೆ ವಾದನ, ದನ-ಕರು, ಕೋಣಗಳ ವಿಶೇಷ ಆಕರ್ಷಣೆಯೊಂದಿಗೆ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾಕಾರರಿಂದ ಪಾದಯಾತ್ರೆ ನಡೆಯಿತು

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷರುಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಶೇಖರ್ ಕುಲಾಲ್, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ರೈತ ಮೋರ್ಚಾ ಸಹಿತ ವಿವಿಧ ಮೋರ್ಚಾ, ಮಂಡಲ, ಪ್ರಕೋಷ್ಠಗಳ ಮತ್ತು ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರು ಮತ್ತು ಸದಸ್ಯರು, ಹೈನುಗಾರರು ಮತ್ತು ರೈತರು ಬೃಹತ್ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಶ್ರೀಕಾಂತ್ ಕಾಮತ್ ವಂದಿಸಿದರು. ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಮೋಹನ ಚಂದ್ರ ಕಾರ್ಯಕ್ರಮ ನಿರೂಪಿಸಿದರು. ಪ್ರಾರಂಭದಲ್ಲಿ ರಾಜ ಆರೂರು ಮತ್ತು ಬಳಗ ರೈತ ಗೀತೆ ಹಾಡಿದರು. ಪ್ರತಿಭಟನಾ ಸಭೆಯ ಬಳಿಕ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಶ್ಯಾಮ್ ಪ್ರಸಾದ್ ಭಟ್ ಅವರ ಅನ್ನಪೂರ್ಣ ನರ್ಸರಿ ಪೇತ್ರಿ ವತಿಯಿಂದ ಸುಮಾರು 500ಕ್ಕೂ ಮಿಕ್ಕಿ ಫಲ-ಪುಷ್ಪಗಳ ಸಸಿಗಳನ್ನು ವಿತರಿಸಲಾಯಿತು

   

Related Articles

error: Content is protected !!