150
ಉಡುಪಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆದ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಸಕಲೇಶಪುರ ಶಾಸಕ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು ಅವರು ಉದ್ಘಾಟಿಸಿದರು
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶ್ಪಾಲ್ ಎ. ಸುವರ್ಣ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಡಾ! ಧನಂಜಯ ಸರ್ಜಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಅಪೇಕ್ಷಿತರು ಉಪಸ್ಥಿತರಿದ್ದರು.

