200
ಉಡುಪಿ: ರಾಜ್ಯದಲ್ಲಿ ಘಟಿಸುತ್ತಿರುವ ಅಹಿತಕರ ವಿದ್ಯಮಾನ ನೋಡಿದಾಗ ರಾಜ್ಯ ಕಾಂಗ್ರೆಸ್ ಸಸರ್ಕಾರ ಭಯೋತ್ಪಾದಕರು ಮತ್ತು ರಾಷ್ಟ್ರದ್ರೋಹಿಗಳ ಹಿಡಿತದಲ್ಲಿ ಆಡಳಿತ ನಡೆಸುತ್ತಿರುವುದು ಕಂಡುಬರುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ, ಕುಕ್ಕರ್ ಬಾಂಬ್ ಸ್ಫೋಟ, ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಯ ಹತ್ಯೆ ಮತ್ತಿತರ ಅನೇಕ ಪ್ರಕರಣ ನೋಡಿದಾಗ ರಾಜ್ಯದಲ್ಲಿ ಜನರಿಗೆ ರಕ್ಷಣೆ ಇದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತಿದೆ ಎಂದರು. ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ ಹಿರೇಮಠ ಅವರ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಿರಂಜನ ಅವರು ತಮ್ಮ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಕಾರ್ಪೋರೇಟರ್‌ಗೇ ರಕ್ಷಣೆ ಇಲ್ಲ ಎಂದರೆ ಇನ್ನು ಜನಸಾಮಾನ್ಯರ ಗತಿಯೇನು ಎಂದು ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನಿಸಿದರು.

