Home » ಲಕ್ಷ್ಮೀನಾರಾಯಣ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ
 

ಲಕ್ಷ್ಮೀನಾರಾಯಣ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ

by Kundapur Xpress
Spread the love

ಬೈಂದೂರು : ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ,ಬೈಂದೂರು ವಿಧಾನ ಸಭಾಕ್ಷೇತ್ರದ ಮಾಜಿ ಶಾಸಕ ಬೈಂದೂರು ಲಕ್ಷ್ಮೀನಾರಾಯಣ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.ಸರಳ ಸಜ್ಜನಿಕೆಯ ಕ್ರಿಯಾಶೀಲ ವ್ಯಕ್ತಿತ್ವದ ಲಕ್ಷ್ಮೀನಾರಾಯಣ ಬೈಂದೂರು ಅವರು ದೂರದರ್ಶಿತ್ವದ ಚಿಂತನೆಯೊಂದಿಗೆ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಮಹತ್ವಪೂರ್ಣ.

ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ, ರಾಮಕ್ಷತ್ರಿಯ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾಗಿ, ಬೈಂದೂರು ಶಾಸಕರಾಗಿ ಲಕ್ಷ್ಮೀನಾರಾಯಣ ಬೈಂದೂರು ಅವರು ಸಾಮಾಜಿಕವಾಗಿ ಸ್ಪಂದಿಸಿದ ರೀತಿ ಸ್ಮರಣೀಯ.ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಆಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   

Related Articles

error: Content is protected !!