ಉಡುಪಿ : ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಅ.15ರಂದು ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವನ್ನು ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ ಮಾರ್ಗದರ್ಶನ ನೀಡಿದರು.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಸಮಾವೇಶವನ್ನುದ್ದೇಶಿಸಿ ಮಾತನಾಡಿದರು
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲೆಯ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಅಭ್ಯರ್ಥಿ ಪ್ರಮುಖ್ ಅರುಣ್ ಕುಮಾರ್ ಶೆಟ್ಟಿ ಪಾದೂರು, ಬಿಜೆಪಿ ಮಂಡಲ ಅಧ್ಯಕ್ಷರುಗಳಾದ ದಿನೇಶ್ ಅಮೀನ್ ಉಡುಪಿ ನಗರ, ನವೀನ್ ನಾಯಕ್ ಕಾರ್ಕಳ, ಜಿತೇಂದ್ರ ಶೆಟ್ಟಿ ಕಾಪು, ರಾಜೀವ ಕುಲಾಲ್ ಉಡುಪಿ ಗ್ರಾಮಾಂತರ, ಸುರೇಶ್ ಶೆಟ್ಟಿ ಗೋಪಾಡಿ ಕುಂದಾಪುರ ಮತ್ತು ದೀಪಕ್ ಕುಮಾರ್ ಶೆಟ್ಟಿ ಬೈಂದೂರು ಹಾಗೂ ಪಕ್ಷದ ಪ್ರಮುಖರು, ಗ್ರಾಮ ಪಂಚಾಯತ್ ಸದಸ್ಯರು, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್ ಸದಸ್ಯರು, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯರು ಮತ್ತು ಪಕ್ಷದ ಜಿಲ್ಲಾ, ಮೋರ್ಚಾ, ಪ್ರಕೋಷ್ಠ ಮತ್ತು ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ವಂದಿಸಿದರು.