Home » ದೇಶದ ಐಕ್ಯತೆ, ಏಕತೆ, ಸಮಗ್ರತೆಗಾಗಿ ‘ಏಕತಾ ಓಟ’ : ಸಂಸದ ಕೋಟ ಶ್ರೀನಿವಾಸ ಪೂಜಾರಿ
 

ದೇಶದ ಐಕ್ಯತೆ, ಏಕತೆ, ಸಮಗ್ರತೆಗಾಗಿ ‘ಏಕತಾ ಓಟ’ : ಸಂಸದ ಕೋಟ ಶ್ರೀನಿವಾಸ ಪೂಜಾರಿ

: ಸಂಸದ ಕೋಟ ಶ್ರೀನಿವಾಸ ಪೂಜಾರಿ

by Kundapur Xpress
Spread the love

ಉಡುಪಿ : ದೇಶಕ್ಕೆ ಏಕತೆಯನ್ನು ಕಂಡುಕೊಳ್ಳಲು, ದೇಶದ ಸಮಗ್ರತೆಯನ್ನು ಕಾಪಾಡುವುದಕ್ಕೋಸ್ಕರ ಭಾರತದ ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರು ನೀಡಿದ ಕೊಡುಗೆ ಅತ್ಯಂತ ಮಹತ್ವಪೂರ್ಣ. ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಏಕತಾ ಓಟ’ದ ಮೂಲಕ ಇಡೀ ದೇಶ ಒಟ್ಟಾಗಿ ಒಂದಾಗಿ ದೇಶದ ಐಕ್ಯತೆ, ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವ ದೃಢ ಸಂಕಲ್ಪ ತೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಭಾರತದ ಮಾಜಿ ಉಪ ಪ್ರಧಾನಿ, ‘ಭಾರತ ರತ್ನ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಎಂಜಿಎಂ ಕಾಲೇಜ್ ಬಳಿಯಿಂದ ಕಡಿಯಾಳಿಯ ವರೆಗೆ ಹಮ್ಮಿಕೊಂಡ ಏಕತಾ ಓಟದಲ್ಲಿ ಭಾಗವಹಿಸಿ ಮಾತನಾಡಿದರು.

ಏಕತಾ ಓಟದ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ ಭಾರತದ ಏಕೀಕರಣಕ್ಕೆ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರು ನೀಡಿದ ಕೊಡುಗೆಯನ್ನು ಭಾರತೀಯರು ಮರೆಯಲು ಅಸಾಧ್ಯ. ಅವರ ಜೀವನಾದರ್ಶವನ್ನು ನೆನಪಿಸಿಕೊಳ್ಳುವ ಜೊತೆಗೆ 150ನೇ ಜಯಂತ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡ ಏಕತಾ ಓಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಸಂಸದರು, ಶಾಸಕರು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಪೆರಣoಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ನಗರ ಸಭೆ ನಿಕಟಪೂರ್ವ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಪ್ರಮುಖರಾದ ರತ್ನಾಕರ್ ಇಂದ್ರಾಳಿ, ಶಶಾಂಕ್ ಶಿವತ್ತಾಯ, ಬಾಲಕೃಷ್ಣ ಶೆಟ್ಟಿ, ವೀಣಾ ಎಸ್. ಶೆಟ್ಟಿ, ಶ್ರೀಕಾಂತ್ ಕಾಮತ್, ನಳಿನಿ ಪ್ರದೀಪ್ ರಾವ್ ಸುಜಾಲ ಸತೀಶ್, ಕಿಶೋರ್ ಕುಮಾರ್ ಕರಂಬಳ್ಳಿ, ಮಂಜುಳಾ ಪ್ರಸಾದ್, ವಿನಯ್ ಕಲ್ಮಾಡಿ , ವಿಜಯ ಭಟ್, ದಿನಕರ ಪೂಜಾರಿ, ಡೇನಿಸ್ ಮಸ್ಕರೇನಸ್, ಗಿರಿಧರ್ ಆಚಾರ್ಯ, ಅಶೋಕ್ ನಾಯ್ಕ್, ರಾಜು, ಆನಂದ್ ಸುವರ್ಣ, ಗುರುಪ್ರಸಾದ್, ಸಂತೋಷ್ ಆಚಾರ್ಯ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

   

Related Articles

error: Content is protected !!