ಉಡುಪಿ : ಈ ಬಾರಿಯ ಲೋಕಸಭಾ ಚುನಾವಣೆ ದೇಶದ ಉಜ್ವಲ ಭವಿಷ್ಯವನ್ನು ನಿರ್ಧರಿಸುವ ಚುನಾವಣೆಯಾಗಿದ್ದು ಸಮೃದ್ಧ, ಸುಭದ್ರ ಹಾಗೂ ಶಕ್ತಿಶಾಲಿ ಭಾರತ ನಿರ್ಮಾಣಕ್ಕಾಗಿ ನರೇಂದ್ರ ಮೋದಿಯವರನ್ನು ಬೆಂಬಲಿಸಲು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ದೊಡ್ಡ ಅಂತರದ ಮತಗಳಿಂದ ಗೆಲ್ಲಿಸಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ನ್ಯಾಯವಾದಿ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದ ಮೋದಿಯವರ ಕಾರ್ಯವೈಖರಿ, ದೇಶದ ಆರ್ಥಿಕತೆ, ಆಂತರಿಕ ಮತ್ತು ಬಾಹ್ಯ ಶತ್ರುಗಳ ನಿಗ್ರಹಕ್ಕೆ ಕೈಗೊಂಡ ಕ್ರಮಗಳನ್ನು ಮೆಚ್ಚಿ ದೇಶದ ಜನತೆ 2ನೇ ಬಾರಿಗೆ 303 ಸ್ಥಾನಗಳೊಂದಿಗೆ ಪ್ರಧಾನಿ ಮೋದಿಯವರಿಗೆ ದೇಶದ ಆಡಳಿತದ ಚುಕ್ಕಾಣಿಯನ್ನು ನೀಡಿದೆ. ದೇಶಕ್ಕೆ ಸ್ವಾತಂತ್ರ್ಯ ದೊರೆತು 76 ವರ್ಷಗಳು ಸಂದರೂ ಸುದೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್ಸಿಗೆ ಕೇವಲ ತುಷ್ಟಿಕರಣ ನೀತಿ, ಹಿಂದೂಗಳ ಧಮನ ಕಾರ್ಯ ಮುಖ್ಯವಾಗಿತ್ತು ವಿನಃ ಹಿಂದೂಗಳ ಶೃದ್ಧಾ ಕೇoದ್ರ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಸಾಧ್ಯವಾಗಲಿಲ್ಲ. ಬದಲಿಗೆ ರಾಮ ಕಾಲ್ಪನಿಕ ವ್ಯಕ್ತಿ ಎಂದು ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಘಾಸಿಯುoಟು ಮಾಡಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇoದ್ರ ಸರಕಾರ 500 ವರ್ಷಗಳ ತ್ಯಾಗ ಬಲಿದಾನದ ಪ್ರತೀಕವಾಗಿ ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ ಮಂದಿರ, ಕಾಶಿ ವಿಶ್ವನಾಥ ಕಾರಿಡಾರ್ ಜೊತೆಗೆ ಮಂದಿರ ನವೀಕರಣ, ಉಜ್ಜಯಿನಿ ಕಾರಿಡಾರ್ ಅಭಿವೃದ್ಧಿಗೊಳಿಸಿ ಶ್ರೀ ಕೃಷ್ಣ ಜನ್ಮಸ್ಥಾನ ಮಥುರೆ ಅಭಿವೃದ್ಧಿಗೂ ಯೋಜನೆ ರೂಪಿಸಿರುವುದು ಐತಿಹಾಸಿಕ ಸಾಧನೆಯಾಗಿದೆ ಎಂದರು.
ಪಕ್ಷದಿಂದ ಉಚ್ಚಾಟನೆಗೊಂಡ ನಾಯಕನ ಪರವಾಗಿಯೇ ಚುನಾವಣಾ ಪ್ರಚಾರ ನಡೆಸುವ ದುಸ್ಥಿತಿ ಕಾಂಗ್ರೆಸ್ಸಿಗೆ ಒದಗಿ ಬಂದಿದೆ. ಓರ್ವ ಉತ್ತಮ ಸಂಸದನಾಗಲು ಭಾಷೆಯೊಂದೇ ಮುಖ್ಯವಾಗಿರದೆ ಇಚ್ಛಾಶಕ್ತಿ, ದೂರದರ್ಶಿತ್ವದ ಚಿಂತನೆ ಮತ್ತು ಚಾಕಚಕ್ಯತೆ ಅತೀ ಅಗತ್ಯವೆನಿಸುತ್ತದೆ. ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಅಪಾರ ಅನುಭವದ ಹೊಂದಿರುವ ಜೊತೆಗೆ 3 ಬಾರಿ ಸಚಿವರಾಗಿ, 2 ಬಾರಿ ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಸಾರ್ಥಕ ಜನಸೇವೆಗೈದಿರುವ ಸರಳ ಸಜ್ಜನ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿಯವರಲ್ಲಿ ಈ ಎಲ್ಲ ಅರ್ಹತೆಗಳಿವೆ. ವಿಕಸಿತ ಭಾರತ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿಸಲು ಬಿಜೆಪಿಯ ಸಮರ್ಥ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಅವರು ಮನವಿ ಮಾಡಿದರು.
ಕೋಟ ಶ್ರೀನಿವಾಸ ಪೂಜಾರಿ ಗೆಲುವು ನಿಶ್ಚಿತ : ಕುತ್ಯಾರು ನವೀನ್ ಶೆಟ್ಟಿ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಎಲ್ಲಾ ಬೂತ್ ಗಳ ಪರಿಶೀಲನಾ ಸಭೆಗಳಲ್ಲಿ ಭಾಗವಹಿಸಿದ ಅನುಭವದಂತೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ಗೆಲುವು ನಿಶ್ಚಿತ, ಖಚಿತ ಎಂದು ಬಿಜೆಪಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.
ಪಕ್ಷದ ಕಾರ್ಯಕರ್ತರು ಏ.26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬೂತಿನ ಎಲ್ಲಾ ಮತದಾರರ ಮತ ಚಲಾವಣೆಯ ತನಕ ವಿರಮಿಸದೆ ಬದ್ಧತೆಯಿಂದ ಕಾರ್ಯಪ್ರವೃತ್ತರಾಗಬೇಕು ಎಂದರು.
ಉಡುಪಿ ಜಿಲ್ಲೆಯ ಬಂಟ ಸಮುದಾಯ ರಾಷ್ಟ್ರೀಯ ವಿಚಾರಧಾರೆಯನ್ನು ನೆಚ್ಚಿಕೊಂಡವರಾಗಿದ್ದು, ದೇಶದ ನಾಯಕತ್ವವನ್ನು ಯಾರಿಗೆ ವಹಿಸಬೇಕು ಎಂದು ನಿರ್ಧರಿಸುವಷ್ಟು ಪ್ರಬುದ್ಧರಾಗಿದ್ದಾರೆ. ವಿರೋಧಿಗಳು ಜಾತಿ ಜಾತಿಯ ನಡುವೆ ವಿಷ ಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದು ಇಂತಹ ವಿಚಾರಗಳನ್ನು ಬದಿಗೊತ್ತಿ, ಸಮಸ್ತ ಮತದಾರರು ರಾಷ್ಟ್ರ ಹಿತದ ಚಿಂತನೆಯಲ್ಲಿ ಒಗ್ಗೂಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಘನತೆ, ಗೌರವ, ಮನ್ನಣೆಯನ್ನು ತಂದುಕೊಟ್ಟ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಸರಳ, ಸಜ್ಜನ, ಅನುಭವಿ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ದಾಖಲೆಯ ಅಂತರದ ಮತಗಳಿಂದ ವಿಜಯಶಾಲಿಯನ್ನಾಗಿಸಬೇಕು ಎಂದು ಕುತ್ಯಾರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಉಡುಪಿ ವಿಧಾನಸಭಾ ಕ್ಷೇತ್ರ ಚುನಾವಣಾ ಸಂಚಾಲಕ ಗಿರೀಶ್ ಎಮ್. ಅಂಚನ್, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ, ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಸಹಿತ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಮಹಾ ಶಕ್ತಿಕೇoದ್ರ, ಶಕ್ತಿಕೇoದ್ರ ಮತ್ತು ಬೂತ್ ಅಧ್ಯಕ್ಷರು ಉಪಸ್ಥಿತರಿದ್ದರು