ಉಡುಪಿ : ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿತಿಂಡಿ ವಿತರಿಸಿ ಸಂಭ್ರಮಾಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಟಿ.ಜಿ. ಹೆಗ್ಡೆ, ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಕುಂದರ್, ಶ್ರೀಕಾಂತ್ ನಾಯಕ್, ಅನಿತಾ ಶ್ರೀಧರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ, ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ಗಿರೀಶ್ ಎಮ್. ಅಂಚನ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ದಿಲೇಶ್ ಶೆಟ್ಟಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಾ ನಾಯ್ಕ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಡೇನಿಸ್ ಮಾಸ್ಕರೇನಸ್, ನಗರಸಭಾ ಸದಸ್ಯರಾದ ಹರೀಶ್ ಶೆಟ್ಟಿ ಅಂಬಲಪಾಡಿ, ಗಿರಿಧರ ಆಚಾರ್ಯ ಕರಂಬಳ್ಳಿ, ಅನಿಟಾ ಮಿಲಿಂಡ ಡಿಸೋಜಾ, ಉಡುಪಿ ನಗರ ಪದಾಧಿಕಾರಿಗಳಾದ ಗುರುರಾಜ್, ಜಯಕರ ಸನಿಲ್, ಸಂತೋಷ್ ಆಚಾರ್ಯ, ಕಿಶೋರ್ ಕರಂಬಳ್ಳಿ, ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)