239
ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಉನ್ನತ ಅಧಿಕಾರಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಸಮಾಲೋಚಿಸಿ ಎಲ್ಲಾ ಸಮಸ್ಯೆಗಳನ್ನು ನಿಗದಿತ ಅವಧಿಯೊಳಗೆ ಪರಿಹರಿಸಲು ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ.ಕೆ ತಿಳಿಸಿದ್ದಾರೆ
ಮಾತನಾಡಿದ ಇವರು ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆ ಬಳಿಯ ಸಮಸ್ಯೆ ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲಿ ಬೀದಿ ದೀಪ ವ್ಯವಸ್ಥೆ ಟ್ರಾಫಿಕ್ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಸಿಗ್ನಲ್ ಅಳವಡಿಕೆ ಕುರಿತು ಸ್ಥಳ ಪರಿಶೀಲಿಸಿ ಸಂಬಂಧ ಪಟ್ಟ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು ಎಂದರು

