Home » ಕೊರಗ ಕುಟುಂಬದ ಮನೆ ನಿರ್ಮಾಣಕ್ಕೆ ಕೋಟ ಮೂರ್ತೆದಾರರ ಸಂಘ ದೇಣಿಗೆ
 

ಕೊರಗ ಕುಟುಂಬದ ಮನೆ ನಿರ್ಮಾಣಕ್ಕೆ ಕೋಟ ಮೂರ್ತೆದಾರರ ಸಂಘ ದೇಣಿಗೆ

by Kundapur Xpress
Spread the love

ಕೋಟ : ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ದಾನಿಗಳ ಸಹಕಾರದೊಂದಿಗೆ ಇಲ್ಲಿನ ಕೋಟತಟ್ಟು ವ್ಯಾಪ್ತಿಯ ಚಿಟ್ಟಿಬೆಟ್ಟು ಕೊರಗ ಕಾಲೋನಿಯಲ್ಲಿ ವಾಸ್ತವ್ಯ ಹೊಂದಿರುವ ಎಂಟು ಕೊರಗ ಸಮುದಾಯದ ಕುಟುಂಬಗಳಿಗೆ ೮೦.ಲಕ್ಷ ಅಂದಾಜು ವೆಚ್ಚದಲ್ಲಿ ಮನೆ ನಿರ್ಮಿಸುತ್ತಿದ್ದು, ಈ ಮಹತ್ಕಾರ್ಯಕ್ಕೆ ಮೂರ್ತೆದಾರರ ಸೇವಾ ಸಹಕಾರಿ ಸಂಘ ಕೋಟದ ವತಿಯಿಂದ ಇಪ್ಪತ್ತೆöÊದು ರೂಪಾಯಿ ಚೆಕ್ ಅನ್ನು ಮಂಗಳವಾರ ಪಂಚಾಯತ್‌ಗೆ ಹಸ್ತಾಂತರಿಸಿದರು.
ಈ ಸಂಧರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷರಾದ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ವಿದ್ಯಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷರಾದ ಕೆ.ಕೊರಗ ಪೂಜಾರಿ, ಉಪಾಧ್ಯಕ್ಷ ಜಯರಾಮ ಪೂಜಾರಿ , ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣು, ನಿರ್ದೇಶಕರಾದ ರಾಜು ಪೂಜಾರಿ, ಜಿ ಸಂಜೀವ ಪೂಜಾರಿ, ಪಿ ಕೃಷ್ಣ ಪೂಜಾರಿ, ರಾಮ ಪೂಜಾರಿ, ಮಂಜುನಾಥ ಪೂಜಾರಿ, ಭಾರತಿ ಎಸ್ ಪೂಜಾರಿ, ಪ್ರಭಾವತಿ ಡಿ ಬಿಲ್ಲವ ಹಾಗೂ ಕೊರಗ ಸಮುದಾಯದ ಕುಟುಂಬದವರು ಉಪಸ್ಥಿತರಿದ್ದರು.

 

Related Articles

error: Content is protected !!