Home ಕರಾವಳಿ ಸುದ್ದಿಡಾ. ಬಿ. ಬಿ. ಹೆಗ್ಡೆ ಕಾಲೇಜು: ರೋವರ್ಸ್ & ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಡಾ. ಬಿ. ಬಿ. ಹೆಗ್ಡೆ ಕಾಲೇಜು: ರೋವರ್ಸ್ & ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Dr. B. B. Hegde College: Inauguration of Rovers & Rangers Unit Annual Activities

by Kundapur Xpress

ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕದ 2026-27ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 23ರಂದು ಕಾಲೇಜಿನ ಎ.ವಿ. ಹಾಲ್ ನಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ, ಉಡುಪಿ ಜಿಲ್ಲೆ ಇದರ ಕಾರ್ಯದರ್ಶಿಗಳಾದ ಶ್ರೀ ಆನಂದ ಅಡಿಗರವರು ಉದ್ಘಾಟಕರಾಗಿ ಆಗಮಿಸಿ ಸ್ವಯಂ ಸೇವಕರ ಜವಾಬ್ದಾರಿ ಹಾಗೂ ಸೇವೆಯ ಮಹತ್ವದ ಕುರಿತು ತಿಳಿಸಿದರು.
ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ಸೀನಿಯರ್ ರೋವರ್ಸ್ ಮೇಟ್ ಶ್ರೇಯಸ್ ಪ್ರಭು ಉಪಸ್ಥಿತರಿದ್ದರು.
ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೆಂಜರ್ಸ್ ಸ್ವಯಂಸೇವಕಿ ಅಶ್ವಿನಿ ಉದ್ಘಾಟಕರನ್ನು ಪರಿಚಯಿಸಿದರು. ಪೂಜಾಶ್ರೀ ಸ್ವಾಗತಿಸಿದರು. ರೇಂಜರ್ ಲೀಡರ್ ಶ್ರೀಮತಿ ರೇವತಿ ಡಿ. ವಂದಿಸಿದರು. ಸೀನಿಯರ್ ರೆಂಜರ್ಸ್ ಮೇಟ್ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Related Articles

Leave a Comment

This site uses Akismet to reduce spam. Learn how your comment data is processed.