Home » ಚುನಾವಣೆ : ಮದ್ಯ ಮಾರಾಟ ನಿಷೇಧ
 

ಚುನಾವಣೆ : ಮದ್ಯ ಮಾರಾಟ ನಿಷೇಧ

by Kundapur Xpress
Spread the love

ಉಡುಪಿ: ಲೋಕಸಭಾ ಚುನಾವಣೆಗೆ ಏಪ್ರಿಲ್ 26 ರಂದು ಮತದಾನ ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಹಿನ್ನಲೆಯಲ್ಲಿ ಏಪ್ರಿಲ್ 24 ರ ಸಂಜೆ 5 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12 ರ ವರೆಗೆ ಹಾಗೂ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂ. 4 ರ ಮಧ್ಯರಾತ್ರಿ 12 ರ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಮದ್ಯಮಾರಾಟ ಡಿಪೋಗಳನ್ನು ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು. ಸ್ಟಾರ್ ಹೋಟೆಲ್‌ಗಳನ್ನು ಶೇಂದಿ ಅಂಗಡಿಗಳನ್ನು ಹಾಗೂ ಕ್ಲಬ್‌ ಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ

   

Related Articles

error: Content is protected !!