431
ಉಡುಪಿ : ಖಾಸಗಿ ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ ( 53ವರ್ಷ ) ಅವರು ನಿನ್ನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನ ಹೊಂದಿದರು ಅವರು ಪತ್ನಿ ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
ಖಾಸಗಿ ಶಾಲಾ ಬಸ್ ಡ್ರೈವರ್ ಅಗಿದ್ದ ಅವರು ಬ್ರಹ್ಮಾವರದಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ ಅವರಿಗೆ ಲಘು ಹೃದಯಾಘಾತವಾದರೂ ಬಸ್ ಅನ್ನು ರಸ್ತೆಯ ಎಡಭಾಗಕ್ಕೆ ಸರಿಸಿ ನಿಲ್ಲಿಸಿ ಸಂಭಾವ್ಯ ಅಪಘಾತವನ್ನು ತಪ್ಪಿಸಿದ್ದರು ಬಸ್‌ನಲ್ಲಿ 50ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರು ಈ ಪೈಕಿ ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು.

