Home » ಗಾಂಜಾ ಮಾರಾಟ : ಪೊಲೀಸರ ದಾಳಿ
 

ಗಾಂಜಾ ಮಾರಾಟ : ಪೊಲೀಸರ ದಾಳಿ

by Kundapur Xpress
Spread the love

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರ-ಕೂಳೂರು ಎಂಬಲ್ಲಿಯ ಫಾಲ್ಗುಣಿ ನದಿಯ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿಯಂತೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ತುಮಕೂರು ಮೂಲದ ಶಾಫಿ ಅಹ್ಮದ್ (40) ಹಾಗೂ ಮುಹಮ್ಮದ್ ಸಮೀರ್ (20) ಎಂದು ಗುರುತಿಸಲಾಗಿದೆ.ಬಂಧಿತ ಆರೋಪಿಗಳಿಂದ ಸುಮಾರು 12 ಗ್ರಾಂ ಎಂಡಿಎಂಎ, 275 ಗ್ರಾಂ ಗಾಂಜಾ ಮತ್ತು 2 ಮೊಬೈಲ್ ಪೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಆರೋಪಿಗಳು ಗಾಂಜಾ ಮತ್ತು ಎಂಡಿಎಂಎಯನ್ನು ಬೆಂಗಳೂರಿನಲ್ಲಿ ಖರೀದಿಸಿರುವುದಾಗಿ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ.ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Related Articles

error: Content is protected !!