ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮಾದಕ ವಸ್ತುಗಳ ಹಾವಳಿ ಮಿತಿ ಮೀರಿದ್ದು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡಬೇಕು ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಮಾದಕ ವಸ್ತುಗಳಲ್ಲಿ ನಿರಂತರವಾಗಿ ಭಾಗಿಯಾದವರಿಗೆ ಗೂಂಡಾ ಕಾಯ್ದೆಯಡಿ ಬಂಧಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧೇಶನ ನೀಡಿದರು ನೈತಿಕ ಪೊಲೀಸ್ ಗಿರಿಯಲ್ಲಿ ತೊಡಗಿರುವ ಗುಂಪುಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಬೇಕು ಆರೋಪಿಗಳು ಯಾರೇ ಇರಲಿ ಮುಲಾಜಿ ಇಲ್ಲದೆ ಕ್ರಮ ಕೈಗೊಳ್ಳಿ ಯಾರು ಕಾನೂನನ್ನು ಕೈಗೆತ್ತಿಕೊಳ್ಳಲು ಸರಕಾರ ಅವಕಾಶ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು