73
ಮಂಗಳೂರು:ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಂದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) 500 ಗ್ರಾಂ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಂಡಿದ್ದು ಆರೋಪಿಯನ್ನು ಹಾಗೂ ಗಾಂಜಾವನ್ನು ಬಜಪೆ ಠಾಣೆ ಪೊಲೀಸರಿಗೆ ಸೋಮವಾರ ಒಪ್ಪಿಸಿದ್ದಾರೆ.
ಬಂಧಿತನನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಮುಂಬೈನಿಂದ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆ ವಿಮಾನ ನಿಲ್ದಾಣ ಸಿಬ್ಬಂದಿ ಆಧರಿಸಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಸಿಐಎಸ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.

