ಬೆಂಗಳೂರು: ಮಂಗಳವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಬುಧವಾರ ಪಂಚಭೂತಗಳಲ್ಲಿ ಲೀನರಾದರು. ಅವರ ಪಾರ್ಥಿವ ಶರೀರದ ಅಂತಿಮ ವಿಧಿವಿಧಾನ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಚಿತಾಗಾರ ದಲ್ಲಿ ನಡೆಯಿತು. ಅವರ ಹಿರಿಯ ಮಗ ಬ್ರಾಹ್ಮಣ ಸಂಪ್ರದಾಯದಂತೆ ವಿಧಿ ವಿಧಾನ ನಡೆಸಿದರು. ಇದಕ್ಕೂ ಮೊದಲು ಪೊಲೀಸರು ಕುಶಲ ತೋಪು ಸಿಡಿಸಿ ದ್ವಾರಕೀಶ್ ಅವರಿಗೆ ಸರ್ಕಾರಿ ಗೌರವ ಸಲ್ಲಿಸಿದರು. ಈ ವೇಳೆ ಕುಟುಂಬದವರು ಹಾಗೂ ಆಪ್ತರು ಹಾಜರಿದ್ದರು.
ಅಂತಿಮ ವಿಧಿವಿಧಾನ ನಡೆಸುವ ಮುನ್ನ ಮುಂಜಾನೆ 7.30ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು. ದ್ವಾರಕೀಶ್ ಅಂತಿಮ ದರ್ಶನ ಪಡೆದು ಶ್ರದ್ದಾಂಜಲಿ ಸಲ್ಲಿಸಿ ಕುಟುಂಬಸ್ಥರನ್ನು ಸಂತೈಸಿದರು. ಬಳಿಕ ಮಾತನಾಡಿದ ಅವರು, ದ್ವಾರಕೀಶ್ ನಮ್ಮೂರಿನವನು ಅವರು ವಿಧಿವಶರಾಗಿರುವುದು ಸಮಸ್ತ ಕನ್ನಡಿಗರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ನನಗೂ ವೈಯಕ್ತಿಕವಾಗಿ ದುಃಖವಾಗಿದೆ ಎಂದರು.