ನವದೆಹಲಿ: ದೆಹಲಿ ಅಬಕಾರಿ ಹಗರಣ ಸಂಬಂಧ ಜಾರಿ ನಿರ್ದೇಶನಾಲದಿಂದ ಬಂಧಿತರಾಗಿರುವ ಮುಖ್ಯಮಂತ್ರಿ ದೆಹಲಿ ಅರವಿಂದ್ ಕೇಜ್ರಿವಾಲ್ ತಕ್ಷಣಕ್ಕೆ ಕೇಂದ್ರದ ತನಿಖಾ ಸಂಸ್ಥೆಗಳ ವಿಚಾರಣಾ ಕುಣಿಕೆಯಿಂದ ಹೊರಬರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ. ಕಾರಣ, ಅಬಕಾರಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ವಿಚಾರಣೆ ಮುಗಿದ ಬೆನ್ನಲ್ಲೇ, ಸಿಬಿಐ ಕೇಜ್ರಿವಾಲ್‌ರನ್ನು ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.