117
ಕುಂದಾಪುರ : ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಸೋಮವಾರ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನದ ವೇಳೆಗೆ ಆಗಮಿಸಿದ ಅವರನ್ನು ದೇವಸ್ಥಾನದ ಆಡಳಿತ ಸಮಿತಿ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಸಂಜೆ ದೇವಸ್ಥಾನದಲ್ಲಿ ನಡೆದ ನವಚಂಡಿಕಾ ಯಾಗದಲ್ಲಿ ಭಾಗಿಯಾದರು. ದೇವಿ ಪರಮ ಭಕ್ತ ಇಳಯರಾಜ ಪ್ರತಿವರ್ಷ ಕೊಲ್ಲೂರಿಗೆ ಭೇಟಿ ನೀಡುತ್ತಾರೆ ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಸದಸ್ಯರಾದ ರಘುರಾಮ ದೇವಾಡಿಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಅವರನ್ನು ಗೌರವಿಸಿದರು.

