284
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಸ್ತುತ ರಾಜ್ಯ ಬಿಜೆಪಿಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರ ಭಾರತೀಯ ಜನತಾ ಪಾರ್ಟಿಯ ಕಚೇರಿಗೆ ಭೇಟಿ ನೀಡಿ, ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ರೂಪು ರೇಷೆಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಕುಂದಾಪುರ ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ನಿಕಟ ಪೂರ್ವ ಅಧ್ಯಕ್ಷರಾದ ಶಂಕರ್ ಅಂಕದಕಟ್ಟೆ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಕೆ. ಎಸ್. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸದಾನಂದ ಉಪ್ಪಿನಕುದ್ರು,, ಪುರಸಭೆ ಸದಸ್ಯರ ಸಂತೋಷ್ ಶೆಟ್ಟಿ, ಕುಂದಾಪುರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜೇಶ್ ಕಡ್ಗಿ ಮನೆ,, ಪಕ್ಷದ ಪ್ರಮುಖರಾದ ಅರುಣ್ ಬಾಣ’, ರತ್ನಾಕರ ಶೇರಿಗಾರ್,, ಇನ್ನಿತರರು ಉಪಸ್ಥಿತರಿದ್ದರು.

