ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆಯಲಿದೆ. ಇದರಲ್ಲಿ ಎಂಟು ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಮತ್ತು ಮಾಜಿ ರಾಜ್ಯಪಾಲರು ಸೇರಿದಂತೆ 1,600ಕ್ಕೂ ಹೆಚ್ಚು ಅಭ್ಯರ್ಥಿಗಳ ಚುನಾವಣಾ ಕಣ ಭವಿಷ್ಯ ನಿರ್ಧಾರವಾಗಲಿದೆ. ಲೋಕಸಭೆ ಚುನಾವಣೆ, 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.