Home » ಪ್ರತೀ ಕ್ಷೇತ್ರಕ್ಕೆ 3ಹೆಸರು ಅಂತಿಮ
 

ಪ್ರತೀ ಕ್ಷೇತ್ರಕ್ಕೆ 3ಹೆಸರು ಅಂತಿಮ

by Kundapur Xpress
Spread the love

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿ ಮುಂದಿನ ವಾರದಲ್ಲಿ ಬಿಡು ಗಡೆಗೊಳ್ಳುವ ಸಾಧ್ಯತೆಯಿದ್ದು, ಇದರಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗುವ ನಿರೀಕ್ಷೆಯಿದೆ.

ಈ ಹಿನ್ನೆಲೆಯಲ್ಲಿ ಭಾನುವಾರ  ಸಂಜೆ ರಾಜ್ಯ ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡ ಚುನಾವಣಾ ನಿರ್ವಹಣಾ ಸಮಿತಿ ಸಭೆ ಮತ್ತು ಕೋರ್‌ಕಮಿಟಿ ಸಭೆ ನಡೆದಿದ್ದು, ಪ್ರತಿ ಕ್ಷೇತ್ರದಿಂದ ಮೂರು ಹೆಸರುಗಳನ್ನು ಅಂತಿಮಗೊಳಿಸಿರುವ ಸಂಭಾವ್ಯರ ಪಟ್ಟಿಯನ್ನು ಎರಡು ಅಥವಾ ಮೂರು ದಿನಗಳಲ್ಲಿ ಹೈಕಮಾಂಡ್‌ ಗೆ ರವಾನಿಸಲು ನಿರ್ಧರಿಸಲಾಗಿದೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಇಬ್ಬರು ವೀಕ್ಷಕರನ್ನು ಕಳುಹಿಸಲಾಗಿತ್ತು. ಕಳೆದ ಮೂರ್ನಾಲ್ಕು ದಿನಗಳಿಂದ ಎಲ್ಲಾ ಕ್ಷೇತ್ರ ಗಳಲ್ಲಿನ ಅಭಿಪ್ರಾಯ ಸಂಗ್ರಹಿಸಿರುವ ವೀಕ್ಷಕರು ನೀಡಿದ ಹೆಸರುಗಳನ್ನು ಸಭೆ ಮುಂದೆ ಇರಿಸಲಾಯಿತು. ಕ್ಷೇತ್ರಗಳು ‘ಮತ್ತು ಅಭ್ಯರ್ಥಿಗಳ ಬಗ್ಗೆ ವಿವರವಾಗಿ ಚರ್ಚೆಯಾಗಿದೆ. ‘ಎರಡು ಅಥವಾ ಮೂರು ದಿನಗಳಲ್ಲಿ ದೆಹಲಿ ವರಿಷ್ಠರಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸಲಾಗುತ್ತದೆ ಎಂದರು.

   

Related Articles

error: Content is protected !!