ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣ ಕಚೇರಿಯನ್ನು ಗುರುವಾರ ಕಡಿಯಾಳಿಯ ಮಾಂಡವಿ ಟ್ರೇಡ್ ಸೆಂಟರ್ ತಳ ಮಹಡಿಯ ದಿ। ಎಂ. ಸೋಮಶೇಖರ್ ಭಟ್ ವೇದಿಕೆಯಲ್ಲಿ ಕ್ಷೇತ್ರದ ಚುನಾವಣಾ ಉಸ್ತುವಾರಿ ಆರಗ ಜ್ಞಾನೇಂದ್ರರವರು ಉದ್ಘಾಟಿಸಿದರು.ಅವರು ಮಾತನಾಡಿ ಕರಾವಳಿ ಸೈದ್ಯಾಂತಿಕವಾಗಿ ಬಲವಾಗಿ ಬೆಳೆದಿದೆ ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅತೀ ಹೆಚ್ಚಿನ ಅಂತರದಲ್ಲಿ ಗೆಲ್ಲಬೇಕು ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದರು
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಭಾರತ ವಿಕಸಿತ ಭಾರತವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಬಾರಿ ಅಭಿವೃದ್ಧಿಯ ಕಾರ್ಯದ ಅಡಿಯಲ್ಲೇ ಚುನಾವಣೆ ಎದುರಿಸಲಿದ್ದೇವೆ ಎಂದರು. ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಯಶಪಾಲ್ ಎ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಮಾಜಿ ಶಾಸಕರಾದ ಕೆ.ರಘಪತಿ ಭಟ್, ಲಾಲಾಜಿ ಮೆಂಡನ್ ಉಪಸ್ಥಿತರಿದ್ದರು ವಿಧಾನಸಭಾ ಕ್ಷೇತ್ರದ ಪ್ರಭಾರಿ ಹಾಗೂ ಸಂಚಾಲಕರಿಗೆ ಬಿಜೆಪಿ ಶಾಲು ಹೊದೆಸಿ ಸಮ್ಮಾನಿಸಲಾಯಿತು ಕೆ. ರಾಘವೇಂದ್ರ ಕಿಣಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಕ್ಷೇತ್ರದ ಚುನಾವಣೆ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ ಸ್ವಾಗತಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೆರ್ಗ ದಿನಕರ ಶೆಟ್ಟಿ ವಂದಿಸಿದರು