170
ಕುಂದಾಪುರ : ಕರ್ನಾಟಕ ರಾಜ್ಯದಲ್ಲಿ ಪ್ರಥಮ ಬಾರಿಗೆ ಗ್ರಾಮೀಣ ಭಾಗದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿಯವರ ಕರ್ನಾಟಕ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ ಮತ್ತು ರಾಜ್ಯ ಸರಕಾರದ ಅನುದಾನದಲ್ಲಿ 1 ಕೋಟಿ ರೂಪಾಯಿ ವೆಚ್ಟದಲ್ಲಿ ಸುಸಜ್ಜಿತ ವಿದ್ಯುತ್ ಚಿತಾಗಾರವು ನಿರ್ಮಾಣಗೊಂಡಿದೆ
ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮ ಪಂಚಾಯತ್ ನ ರಾಷ್ಟ್ರೀಯ ಹೆದ್ದಾರಿ ಹತ್ತಿರದ ಹಿಂದೂ ರುದ್ರ ಭೂಮಿಯ ಬಳಿಯಲ್ಲಿ ನಿರ್ಮಾಣಗೊಂಡಿರುವ ಈ ಚಿತಾಗಾರವು ದಿನಾಂಕ 23-5 – 2025 ಶುಕ್ರವಾರ ಬೆಳಿಗ್ಗೆ 10-00 ಘಂಟೆಗೆ ಲೋಕಾರ್ಪಣಿಗೊಳ್ಳಲಿದೆ.

