ಕೋಟ; ಇಲ್ಲಿನ ಕೋಟ ಪಡುಕರೆಯ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮರ್ಜೆ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮ ಶುಕ್ರವಾರ ಕಾಲೇಜಿನ ಪ್ರಾಂಗಣದಲ್ಲಿ ಜರಗಿತು.
ಈ ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿ ಮೇಳಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿ ಇತ್ತೀಚಿಗಿನ ವರ್ಷಗಳಲ್ಲಿ ದೇಶಾದ್ಯಂತ ನಿರೂದ್ಯೋಗ ಸಮಸ್ಯೆ ಕಾಡುತ್ತಿದೆ ಇದಕ್ಕೆ ಮೂಲ ಕಾರಣ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿವಿಧ ಇಲಾಖೆಗಳಲ್ಲಿರುವ ಹುದ್ದೆಗಳನ್ನು ಭರ್ತಿ ಮಾಡಿದರೆ ಅರ್ಧದಂಶ ಯುವ ಸಮೂಹಕ್ಕೆ ಉದ್ಯೋಗ ಸಿಗುವಂತ್ತಾಗುತ್ತದೆ ಈ ದಿಸೆಯಲ್ಲಿ ಸರಕಾರವನ್ನು ಒತ್ತಾಯಿಸಿದರಲ್ಲದೆ ಪ್ರತಿ ಕಾಲೇಜುಗಳಲ್ಲಿ ಈ ರೀತಿಯ ಉದ್ಯೋಗ ಮೇಳಗಳು ನಡೆದರೆ ನಿರೂದ್ಯೋಗ ಸಮಸ್ಯೆ ಸ್ವಲ್ಪ ಮಟ್ಟಿಗೆ ಕಡಿತಗೊಳಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟರು
ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಸುನೀತಾ.ವಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಜ್ಞಾನಜ್ಯೋತಿ ಕುಂದಾಪುರ ಇದರ ನಿರ್ದೇಶಕ ಸತ್ಯನಾರಾಯಣ, ಧೀನ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನಾ ತರಬೇತಿ ಕೇಂದ್ರ ಬೈಂದೂರು ಇದರ ಸಂಯೋಜಕ ಭಾಸ್ಕರ್ ಬಿಲ್ಲವ ಉಪಸ್ಥಿತರಿದ್ದರು. ಉಪನ್ಯಾಸಕ ಉದ್ಯೋಗ ಮೇಳದ ಸಂಘಟಕ ಸುಬ್ರಹ್ಮಣ್ಯ ಎ ಸ್ವಾಗತಿಸಿದರು.
ಕಾರ್ಯಕ್ರಮವನ್ನು ಉಪನ್ಯಾಸಕ ರಾಜಣ್ಣ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶಂಕರ್ ನಾಯ್ಕ್ ವಂದಿಸಿದರು.
ಮೇಳೈಸಿದ ಉದ್ಯೋಗಮೇಳ
ಸಾಮಾನ್ಯವಾಗಿ ಸಿಟಿ ಭಾಗಗಳಲ್ಲಿ ಹೆಚ್ಚಾಗಿ ಉದ್ಯೋಗಮೇಳಗಳನ್ನು ಹಮ್ಮಿಕೊಂಡು ಒಂದಿಷ್ಟು ಯುವ ಸಮೂಹಕ್ಕೆ ಉದ್ಯೋಗದ ಭರವಸೆ ಕಾಣುತ್ತಾರೆ, ಅದರಂತೆ ಗ್ರಾಮೀಣ ಕರಾವಳಿ ಭಾಗದಲ್ಲಿ ಕಾಲೇಜು ಒಂದರಲ್ಲಿ ಬೃಹತ್ ಉದ್ಯೋಗ ಮೇಳ ನಡೆಸಿ ಸುಮಾರು 35ಅಧಿಕ ಪ್ರಸಿದ್ಧ ಕಂಪನಿಗಳು ಈ ಮೇಳದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.
ವಿದ್ಯಾರ್ಥಿಗಳ ದಂಡು
ಇಲ್ಲಿನ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಮೊಟ್ಟ ಮೊದಲ ಬಾರಿಗೆ ಬೃಹತ್ ಮಟ್ಟದ ಉದ್ಯೋಗ ಮೇಳದಲ್ಲಿ ಬೇರೆ ಬೇರೆ ಊರುಗಳಿಂದ ಉದ್ಯೋಗ ವಂಚಿತ ಯುವ ಸಮುದಾಯ ವಿವಿಧ ಕಂಪನಿಗಳಲ್ಲಿ ತಮ್ಮ ಶೈಕ್ಷಣಿಕ ಮಾಹಿತಿಗಳನ್ನು ನೀಡಿದರು.ಸುಮಾರು 700ಕ್ಕೂ ಅಧಿಕ ಕಾಲೇಜು ಮುಗಿಸಿದ ವಿದ್ಯಾರ್ಥಿಗಳ ದಂಡು ಪಡುಕರೆ ಕಾಲೇಜಿನ ಕ್ಯಾಂಪಸ್‍ನಲ್ಲಿ ಕಂಡುಬಂತು.