ಕೋಟ : ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ ಜಿಲ್ಲೆ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಾರ್ಯಾಲಯ ಇವರ ಸಹಯೋಗದೊಂದಿಗೆ ಬೀದಿ ವ್ಯಾಪಾರಿಗಳಿಗೆ ಸ್ವನಿಧಿ ಸೇ ಸಮೃದ್ಧಿ ಯೋಜನೆಯಡಿಯಲ್ಲಿ ಭಧ್ರತಾ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ಸ್ವಸಹಾಯ ಸಂಘದ ಸದಸ್ಯರಿಗೆ ಸ್ವಉದ್ಯೋಗ ತರಬೇತಿ ಕುರಿತು ಒಂದು ದಿನದ ಕಾರ್ಯಾಗಾರವನ್ನು ಗುರುವಾರ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿತು.
ಪಿ.ಎ.ಎಫ್.ಎ.ಇ ಉಡುಪಿ ಡಿ.ಆರ್.ಪಿ ರೂಪಶ್ರೀ ಇವರು ಯೊಜನೆಗಳ ಸಾಲ ಸೌಲಭ್ಯಗಳ ಮಾಹಿತಿ ನೀಡಿದರು, ಕವಿತಾ ಹಂದೆ ಇವರು ಸ್ವ ಉದ್ಯೋಗ ತರಬೇತಿ ನೆಡೆಸಿಕೊಟ್ಟರು, ಸಭೆಯಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ, ಉಪಾಧ್ಯಕ್ಷರಾದ ಗಿರಿಜಾ, ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್, ಮತ್ತು ಜಿಲ್ಲಾ ಕೌಶಲ್ಯ ಮಿಶನ್‌ನ ಮೆನೇಜರ್ ರಾಮಕೃಷ್ಣ, ಜಿಲ್ಲಾ ಕೌಶಲ್ಯ ಮಿಶನ್‌ನ ಗೀತಾ, ಹಾಜರಿದ್ದರು, ಪಟ್ಟಣ ಪಂಚಾಯತ್ ಸಿಬ್ಬಂದಿ ಸುಮಿತಾ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಮರ್ಪಿಸಿದರು