ಶಿವಮೊಗ್ಗ : ಬಿಜೆಪಿ ವಿರುದ್ಧ ಬಂಡೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಸೋಮವಾರ ಶಿವಮೊಗ್ಗದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೂ ಹೋಗದೆ ಸಡ್ಡು ಹೊಡೆದಿದ್ದಾರೆ. ನಿರೀಕ್ಷೆಯಂತೆ ಗೈರು ಹಾಜರಾದ ಅವರು, ಜಿಲ್ಲೆಯ ವಿವಿಧ ಮಠಗಳಿಗೆ ಭೇಟಿ ನೀಡಿ ಅಲ್ಲಿನ ಸ್ವಾಮೀಜಿಗಳ ಜೊತೆ ಮಾತುಕತೆ ನಡೆಸಿದರು.
ಸೋಮವಾರ’ ಬೆಳಗ್ಗೆಯಿಂದಲೇ ಭದ್ರಾವತಿಯ ಬಿಳಕಿ ಮಠ, ಗೋಣಿಬೀಡು, ಹಿರೇಮಾಗಡಿ, ಮೂಡಿ, ಶಾಂತಪುರ ಮಠ, ಸೊರಬದ ಜಡೆ ಹಿರೇಮಠ, ಹೊಸನಗರದ ಮೂಲೆಗದ್ದೆ, ಹಾರ್ನಳ್ಳಿ ಚೌಕಿಮಠ, ಹುಂಚ, ಶಿಕಾರಿಪುರದ ಸಾಲೂರು, ಶಿರಾಳಕೊಪದ ಮಠಗಳಿಗೆ ಭೇಟಿ ನೀಡಿ ಅಲ್ಲಿನ ಸಾಧು ಸಂತರು, ಪೀಠಾಧೀಶರನ್ನು ಭೇಟಿ ಮಾಡಿದರು