ಬೆಂಗಳೂರು : ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಫೈರ್ ಬ್ಯಾಂಡ್ ಎಂದೇ ಗುರುತಿಸಿ ಕೊಂಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಎರಡನೇ ಹಂತದ ಲೋಕಸಭಾ ಚುನಾ ವಣೆಯ ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. ಈಶ್ವರಪ್ಪ ನಾಮಪತ್ರ ವಾಪಸ್ ತೆಗೆದುಕೊಳ್ಳದೇ ಕಣದಲ್ಲಿ’ ಉಳಿದ ಬೆನ್ನಲ್ಲೇ ಸಂಜೆ ಅವರ ಉಚ್ಚಾಟನೆಯ ಆದೇಶ ಬಿಜೆಪಿಯಿಂದ ಹೊರಬಿದ್ದಿದೆ. ‘ಪಕ್ಷದ ಸೂಚನೆಯನ್ನು ಕಡೆಗಣಿಸಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೀರಿ. ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಪಕ್ಷದಿಂದ ಉಚ್ಚಾಟಿಸಲಾಗಿದೆ’ ಎಂದು ಬಿಜೆಪಿಯ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಅವರು ಉಚ್ಚಾಟನಾ ಆದೇಶದಲ್ಲಿ ತಿಳಿಸಿದ್ದಾರೆ