Home » ಇ.ಎಸ್.ಐ (ESI) ವಿಮಾ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವಂತೆ ಸರಕಾರದ ಗಮನ ಸೆಳೆದ
 

ಇ.ಎಸ್.ಐ (ESI) ವಿಮಾ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವಂತೆ ಸರಕಾರದ ಗಮನ ಸೆಳೆದ

ಕುಂದಾಪುರ ಶಾಸಕ ಎ. ಕಿರಣ್ ಕೊಡ್ಗಿ

by Kundapur Xpress
Spread the love

ಬೆಳಗಾವಿ : ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸೆ ಒದಗಿಸುವ (ಕಾರ್ಮಿಕ ರಾಜ್ಯ ವಿಮಾ ಯೋಜನೆ) ಸೇವೆಗಳ ಇಲಾಖೆ ಹಾಗೂ ಆಯ್ದ ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ (ಟೈ ಅಪ್) ಮಾಡಿಕೊಂಡ ಒಡಂಬಡಿಕೆಯ ಅವಧಿಯು ಈಗಾಗಲೇ ಡಿಸೆಂಬರ್ 7 ರಂದು ಮುಕ್ತಾಯಗೊಂಡಿದ್ದು ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದು ಖಾಸಗಿ ಆಸ್ಪತ್ರೆಯ ಒಡಂಬಡಿಕೆ ನವೀಕರಣ ಆಗದ ಕಾರಣ ಚಿಕಿತ್ಸೆಯನ್ನು ನೀಡಲು ನಿರಾಕರಿಸುತ್ತಿದ್ದು ವಿಮಾ ಅರ್ಹ ರೋಗಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಇಂದು ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿ ಅತಿ ಜರೂರು ರಾಗಿ ಕಾರ್ಮಿಕ ರಾಜ್ಯ ವಿಮಾ ಯೋಜನೆ ಸೇವೆಗಳ ಇಲಾಖೆ ಮತ್ತು ಆಯ್ದ ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ (ಟೈ ಅಪ್) ಒಡಂಬಡಿಕೆಯನ್ನು ನವೀಕರಿಸಿ ವಿಮಾ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಯನ್ನು ಕ್ಲಪ್ತ ಸಮಯದಲ್ಲಿ ನೀಡುವ ಬಗ್ಗೆ ಶಾಸಕರು ಸಚಿವರೊಂದಿಗೆ ಚರ್ಚೆ ನಡೆಸಿ ಕ್ರಮಕೈಗೊಳ್ಳುವಂತೆ ವಿನಂತಿಸಿದ್ದರು. ಸಚಿವರು ಮಾತನಾಡಿ ಸೂಕ್ತ ಕ್ರಮದ ಬಗ್ಗೆ ಭರವಸೆ ನೀಡಿದರು.

 

Related Articles

error: Content is protected !!