Home » ಎಕ್ಸಲೆಂಟ್ ಪಿಯು ಕಾಲೇಜು : ಗುರುವಂದನಾ ಕಾರ್ಯಕ್ರಮ
 

ಎಕ್ಸಲೆಂಟ್ ಪಿಯು ಕಾಲೇಜು : ಗುರುವಂದನಾ ಕಾರ್ಯಕ್ರಮ

by Kundapur Xpress
Spread the love

ಕುಂದಾಪುರ : ಹಿಂದೂ ಪಂಚಾಗದ ಪ್ರಕಾರ ಆಷಾಡ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರುಪೂರ್ಣಿಮೆ ಎಂದು ಆಚರಿಸುತ್ತಾರೆ. ಶಿಷ್ಯನು ತಮ್ಮ ಗುರುಗಳಿಗೆ ಕೃತಜ್ಞತೆ ಸಲ್ಲಿಸುತ್ತ ಈ ಹಬ್ಬವನ್ನು ಅತ್ಯಂತ ಶೃದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ ಎಂದು ಸಂಸ್ಕೃತ ಭಾಷಾ ವಿದ್ವಾಂಸರಾದ ವಿದ್ವಾನ್ ಮಾಧವ ಅಡಿಗರು ತಿಳಿಸಿದರು.

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲ್ಪಟ್ಟ ಗುರುಪೂರ್ಣಿಮೆ ದಿನಾಚರಣೆಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ವಿದ್ವಾನ್ ಮಾಧವ ಅಡಿಗರು, ಗುರು ಎಂದರೆ ಸಮಾಜದಲ್ಲಿರುವ ತಪ್ಪುಗಳನ್ನು ತಿದ್ದಿ, ಪ್ರತಿ ಮಕ್ಕಳಿಗೂ ಕಲಿಸುವವನು. ವಿದ್ಯಾರ್ಥಿಗಳಲ್ಲಿನ ಆತ್ಮವಿಶ್ವಾಸ ಹೆಚ್ಚಿಸಿದಾಗ ಮಾತ್ರ ಗುರುಶಿಷ್ಯರಲ್ಲಿ ಬಾಂಧವ್ಯ ಹುಟ್ಟಿಕೊಳ್ಳಲು ಸಾಧ್ಯ ಎಂದು ಹೇಳಿದರು. ಯೋಗ ಸಂಪ್ರದಾಯದಲ್ಲಿ ಈ ದಿನವನ್ನು ಶಿವನು ಸಪ್ತರ್ಷಿಗಳಿಗೆ ಯೋಗ ವಿದ್ಯೆಯನ್ನು ಧಾರೆಯೆರೆದು ಪ್ರಥಮ ಗುರು ಆದ ದಿನ ಎಂಬ ನಂಬಿಕೆಯಿAದ ಆಚರಿಸುತ್ತಾರೆ. ವೇದವ್ಯಾಸ ಮಹರ್ಷಿಗಳು ಈ ದಿನ ಹುಟ್ಟಿದ್ದಲ್ಲದೆ, ಆಷಾಡ ಶುಕ್ಲ ಪಕ್ಷದಲ್ಲೇ ಬ್ರಹ್ಮ ಸೂತ್ರಗಳ ರಚನೆ ಪ್ರಾರಂಭಿಸಿದರು. ಈ ದಿನ ಆ ಶುಕ್ಲ ಪಕ್ಷ ಕೊನೆಗೊಳ್ಳುತ್ತದೆ. ಇದರ ಸ್ಮರಣಾರ್ಥವಾಗಿ ಈ ದಿನದಂದು ಬ್ರಹ್ಮ ಸೂತ್ರಗಳ ಪಠಣ ಮಾಡಲಾಗುತ್ತದೆ ಎಂದು ಅಡಿಗರು ತಿಳಿಸಿದರು. ಇದೇ ಸಂದರ್ಭದಲ್ಲಿ ವಿದ್ವಾನ್ ಮಾಧವ ಅಡಿಗರಿಗೆ ಶಾಲು ಹೊದಿಸಿ, ಪೇಟ ತೋಡಿಸಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಅವರ ಹಣೆಗೆ ತಿಲಕವನ್ನಿಟ್ಟು, ಆರತಿ ಬೆಳಗುವುದರ ಮೂಲಕ ಗುರುವಂದನೆ ಸಲ್ಲಿಸಿದರು. ಗುರು ಪೂರ್ಣಿಮೆಯ ಮಹತ್ವವನ್ನು ಅದ್ವಿತಾ ೮ನೇ ತರಗತಿ, ಪ್ರಕೃತಿ 8ನೇ ತರಗತಿ ಹಾಗೂ ಶ್ರೀಮತಿ ಉಷಾಲತಾ ಹಿಂದಿ ಶಿಕ್ಷಕಿ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅರ್ಥಶಾಸ್ತç ವಿಭಾಗದ ಮುಖ್ಯಸ್ಥರಾದ ಶ್ರೀನಿವಾಸ ವೈದ್ಯ, ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ವಹಿಸಿದ್ದರು. ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಸರೋಜಿನಿ ಪಿ ಆಚಾರ್ಯರವರು ಸರ್ವರನ್ನು ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಶಿಕ್ಷಕ ಸಂದೀಪ್ ಕಾರ್ಯಕ್ರಮವನ್ನು ನಿರೂಪಿಸಿ, ಆಂಗ್ಲಭಾಷ ಶಿಕ್ಷಕಿ ಹರಿಚಂದನಾ ವಂದಿಸಿದರು.

 

Related Articles

error: Content is protected !!