Home » ಎತ್ತರ ಜಿಗಿತ ಸ್ಪರ್ಧೆ ಸಂಹಿತ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.
 

ಎತ್ತರ ಜಿಗಿತ ಸ್ಪರ್ಧೆ ಸಂಹಿತ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

by Kundapur Xpress
Spread the love

ಕುಂದಾಪುರ: ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ವಲಯ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ೧೪ರ ವಯೋಮಿತಿಯೊಳಗಿನ ಎತ್ತರ ಜಿಗಿತ ಸ್ಪರ್ಧೆಯಲ್ಲಿ ನಮ್ಮ ಎಕ್ಸಲೆಂಟ್ ಪ್ರೌಢಶಾಲೆಯ ೯ನೇ ತರಗತಿಯ ಸಂಹಿತ ಶೆಟ್ಟಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾಳೆ. ಈ ಅತ್ಯುತ್ತಮ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗೆ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರಾದ ಎಂ ಮಹೇಶ್ ಹೆಗ್ಡೆ, ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಸರೋಜಿನಿ ಪಿ ಆಚಾರ್ಯ ಹಾಗೂ ಶಿಕ್ಷಕ-ಶಿಕ್ಷಕೇತರ ವರ್ಗದವರು ಅಭಿನಂದನೆ ಸಲ್ಲಿಸುತ್ತಾ, ಮುಂದಿನ ಎಲ್ಲಾ ಹಂತದಲ್ಲೂ ವಿಜಯ ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

 

Related Articles

error: Content is protected !!