Home » ಎಫ್ ಎಸ್ ಎಲ್‌ ವರದಿ ದೃಢ
 

ಎಫ್ ಎಸ್ ಎಲ್‌ ವರದಿ ದೃಢ

by Kundapur Xpress
Spread the love

ಬೆಂಗಳೂರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜ ಎಂಬುದು ಎಫ್ ಎಸ್ಎಲ್‌ ವರದಿಯಲ್ಲಿ ದೃಢವಾಗಿದೆ ಎಂದು ಪ್ರತಿಪಾದಿಸಿರುವ ಪ್ರತಿಪಕ್ಷ ಬಿಜೆಪಿ ನಾಯಕರು, ರಾಜ್ಯ ಸರ್ಕಾರ ಈ ವರದಿಯನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಶುಕ್ರವಾರ ಪ್ರತ್ಯೇಕವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಅವರು  ಎಫ್‌ಎಸ್‌ಎಲ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಸಾಬೀತಾಗಿದೆ ಎಂದು ಹೇಳಿದರು.

ವಿಜಯೇಂದ್ರ ಮಾತನಾಡಿ, ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಘೋಷಣೆ ಕೂಗಿದ್ದು ಸತ್ಯ ಎಂಬುದಾಗಿ ಎಫ್ ಎಸ್ಎಲ್‌ ವರದಿ ಶುಕ್ರವಾರ ಬೆಳಗ್ಗೆ ಬಂದಿದೆ. ಅದನ್ನು ಮುಚ್ಚಿಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಎಫ್‌ ಎಸ್‌ ಎಲ್ ವರದಿ ತಿದ್ದುಪಡಿ ಮಾಡಿ ಮತ್ತೊಂದು ಬೋಗಸ್ ವರದಿ ಸಿದ್ದಪಡಿಸಲಾಗುತ್ತಿದೆ ಎಂಬ ಅನುಮಾನ ನಮ್ಮನ್ನು ಕಾಡುತ್ತಿದೆ. ಆ ವರದಿಯನ್ನು ತಿರುಚದೆ ಯಥಾವತ್ತಾಗಿ ಜನರ ಮುಂದಿಡಬೇಕು. ತಪ್ಪಿತಸ್ಥರನ್ನು ಒದ್ದು ಒಳಗೆ ಹಾಕಬೇಕು ಎಂದು ಬಿ ವೈ ವಿಜಯೇಂದ್ರ ರವರು ಒತ್ತಾಯಿಸಿದರು

   

Related Articles

error: Content is protected !!